ಮದುವೆ ತಯಾರಿ ನಡುವೆ ಶೂಟಿಂಗ್‌ನಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿ
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಅವರು ವಿಜಯ್ ದೇವರಕೊಂಡ (Vijay Devarakonda) ಜೊತೆ ಫೆ.26ರಂದು ಉದಯಪುರದಲ್ಲಿ ಮದುವೆಯಾಗಲಿದ್ದಾರೆ. ಮದುವೆ ತಯಾರಿ ನಡುವೆ ಒಪ್ಪಿಕೊಂಡ ಸಿನಿಮಾದ ಶೂಟಿಂಗ್‌ನಲ್ಲಿ ನಟಿ ಭಾಗಿಯಾಗಿದ್ದಾರೆ.

ಅಟ್ಲಿ ನಿರ್ದೇಶನದ, ಅಲ್ಲು ಅರ್ಜುನ್ (Allu Arjun) ನಟನೆಯ ಹೊಸ ಚಿತ್ರದ ಶೂಟಿಂಗ್ ಮುಂಬೈನಲ್ಲಿ ನಡೆಯುತ್ತಿದೆ. ಈ ಪ್ರಾಜೆಕ್ಟ್‌ನಲ್ಲಿ ರಶ್ಮಿಕಾ ಕೂಡ ನಟಿಸುತ್ತಿದ್ದಾರೆ. ಅದಕ್ಕಾಗಿ ಈಗಾಗಲೇ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದು, ಫೆಬ್ರವರಿ ಮಧ್ಯ ಭಾಗದವರೆಗೂ ಶೂಟಿಂಗ್ ನಡೆಯಲಿದೆ. ಅಷ್ಟರಲ್ಲಿ ಅವರ ಪಾತ್ರದ ಚಿತ್ರೀಕರಣವನ್ನು ಮುಗಿಸಿ ಕೊಡಲಿದ್ದಾರೆ.

ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅವರದ್ದು ಹಿಟ್ ಫೇರ್. ಈ ಸಿನಿಮಾದ ಮೂಲಕ ಅವರು ಮತ್ತೆ ಒಂದಾಗಿರೋದು ಫ್ಯಾನ್ಸ್ಗೆ ಖುಷಿ ಕೊಟ್ಟಿದೆ. ಈ ಚಿತ್ರದಲ್ಲಿ ನೆಗೆಟಿವ್ ರೋಲ್‌ನಲ್ಲಿ ಕಾಣಿಸಿಕೊಳ್ತಿದ್ದಾರೆ. ಕೊಂಚ ಬೋಲ್ಡ್ ಆಗಿ ಕ್ಯಾಮೆರಾ ಮುಂದೆ ಬರಲಿದ್ದಾರೆ. ಹೀಗಾಗಿ ಚಿತ್ರದ ಮೇಲಿನ ನಿರೀಕ್ಷೆ ಫ್ಯಾನ್ಸ್‌ಗೆ ಡಬಲ್ ಆಗಿದೆ.

ಮದುವೆ ತಯಾರಿ ನಡುವೆಯೂ ಶೂಟಿಂಗ್‌ನಲ್ಲಿ ಭಾಗಿಯಾಗ್ತಿರೋದು ಕೇಳಿ ನಟಿಯ ವರ್ಕ್ ಡೆಡಿಕೇಷನ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

