Duniya Vijay: ಯುಗಾದಿ ಹಬ್ಬಕ್ಕೆ ಜೀ5ನಲ್ಲಿ ‘ಲ್ಯಾಂಡ್ ಲಾರ್ಡ್’ ರಿಲೀಸ್‌ಗೆ ರೆಡಿ

Duniya Vijay: ಯುಗಾದಿ ಹಬ್ಬಕ್ಕೆ ಜೀ5ನಲ್ಲಿ ‘ಲ್ಯಾಂಡ್ ಲಾರ್ಡ್’ ರಿಲೀಸ್‌ಗೆ ರೆಡಿ

ದುನಿಯಾ ವಿಜಯ್‌ (Duniya Vijay) ನಟನೆಯ ಆಕ್ಷನ್ ಡ್ರಾಮಾ ʻಲ್ಯಾಂಡ್ ಲಾರ್ಡ್ʼ (Landlord) ಇದೇ ಮಾರ್ಚ್ 19ಕ್ಕೆ ಜೀ5ನಲ್ಲಿ ಬಿಡುಗಡೆ ಆಗಲಿದೆ. ಜಡೇಶ್ ಕೆ ಹಂಪಿ ನಿರ್ದೇಶನದ ಈ ಚಿತ್ರ 1980ರಲ್ಲಿ ಗ್ರಾಮೀಣ ಕರ್ನಾಟಕದಲ್ಲಿ ನಡೆಯುವ ಕಥೆಯನ್ನು ಹೇಳುತ್ತದೆ. ಈ ಚಿತ್ರವು ಸಾರಥಿ ಫಿಲಂಸ್ ಲಾಂಛನದಲ್ಲಿ ನಿರ್ಮಾಣಗೊಂಡಿದೆ.

ಈ ಚಿತ್ರದಲ್ಲಿ ದುನಿಯಾ ವಿಜಯ್, ರಚಿತಾ ರಾಮ್ (Rachita Ram), ರಾಜ್ ಬಿ‌ ಶೆಟ್ಟಿ, ರಿತನ್ಯಾ ವಿಜಯ್, ಉಮಾಶ್ರೀ, ಭಾವನಾ ರಾವ್, ಸಂಪತ್ ಮೈತ್ರೇಯ ಮುಂತಾದವರು ನಟಿಸಿರುತ್ತಾರೆ. ಇಂತಹ ಒಂದು ಬಹುತಾರಾಗಣವನ್ನು ಹೊಂದಿರುವ ಚಿತ್ರ ಈಗಾಗಲೇ ಚಿತ್ರಮಂದಿರದಲ್ಲಿ ಪ್ರೇಕ್ಷಕರ ಗಮನ ಸೆಳೆದಿದ್ದು, ಇದೀಗ ಜೀ5ನಲ್ಲಿ ಬಿಡುಗಡೆ ಆಗುತ್ತಿದೆ.

ಚಿತ್ರದಲ್ಲಿ ತನ್ನ ಪಾತ್ರದ ಕುರಿತು ಮಾತನಾಡಿದ ನಟ ದುನಿಯಾ ವಿಜಯ್, ನಾನು ರಾಚಯ್ಯ ಎಂಬ ಪಾತ್ರವನ್ನು ವಹಿಸಿದ್ದೇನೆ. ರಾಚಯ್ಯನು ಒಬ್ಬ ಅಂತರ್ಮುಖಿ‌. ಹೆಚ್ಚು ಮಾತನಾಡದೇ ಒಳಗಿನ ಭಾವನೆಗಳನ್ನು ವ್ಯಕ್ತಪಡಿಸುವ ಈ ಪಾತ್ರ ನನಗೆ ಒಂದು ಸವಾಲಾಗಿತ್ತು. ಇದೀಗ ಈ ಚಿತ್ರವು ಜೀ5ನಲ್ಲಿ ಬಿಡುಗಡೆ ಆಗುತ್ತಿರುವುದು ನನಗೆ ಸಂತಸ ತಂದಿದೆ. ಪ್ರೇಕ್ಷಕರ ಅಭಿಪ್ರಾಯಕ್ಕಾಗಿ ಕಾಯುತ್ತಿದ್ದೇನೆ ಎಂದಿದ್ದಾರೆ.

ಚಿತ್ರದ ಬಗ್ಗೆ ಹಾಗೂ ತನ್ನ ಪಾತ್ರದ ಕುರಿತು ಮಾತನಾಡಿದ ನಟಿ ರಚಿತಾ ರಾಮ್, ಚಿತ್ರವು ಸರಳವಾಗಿದ್ದರೂ, ಕಥೆಯಲ್ಲಿರುವ ಭಾವನೆಗಳು ಆಳವಾಗಿವೆ. ಅಗಾಧವಾದ ಭಾವನೆಗಳನ್ನು ವ್ಯಕ್ತಪಡಿಸುವ ಕಥೆಯೇ ಲ್ಯಾಂಡ್ ಲಾರ್ಡ್. ಇದರಲ್ಲಿ ನನ್ನದು ಬಹಳ ವಿಶೇಷವಾದ ಪಾತ್ರ ಎಂದು ಖುಷಿಯಿಂದ ಹೇಳಿಕೊಂಡಿದ್ದಾರೆ. ಒಟಿಟಿಯಲ್ಲಿ ಮತ್ತೆ ರಿಲೀಸ್‌ ಆಗೋ ಲ್ಯಾಂಡ್‌ ಲಾರ್ಡ್‌ ನೋಡಿ ಫ್ಯಾನ್ಸ್‌ ಏನ್‌ ಹೇಳ್ತಾರೆ ಎಂದು ಕಾದುನೋಡಬೇಕಿದೆ.

News Desk Sandalwood Times

error: Content is protected !!