ಮೊದಲ ಹಂತದ ಚಿತ್ರೀಕರಣ ಮುಗಿಸಿದ ನಾಗರಾಜ್ ಸೋಮಯಾಜಿ ನಿರ್ದೇಶನದ ‘ದೇವಿ ಮಹಾತ್ಮೆ’ ಸಿನಿಮಾ

ಮೊದಲ ಹಂತದ ಚಿತ್ರೀಕರಣ ಮುಗಿಸಿದ ನಾಗರಾಜ್ ಸೋಮಯಾಜಿ ನಿರ್ದೇಶನದ ‘ದೇವಿ ಮಹಾತ್ಮೆ’ ಸಿನಿಮಾ

ಡುಪಿ ಜಿಲ್ಲೆಯ ಕಮಲಶಿಲೆಯ ಬ್ರಹ್ಮಿ ದೇಗುಲದಲ್ಲಿ ಮುಹೂರ್ತ ನೆರವೇರಿಸಿದ್ದ ‘ದೇವಿ ಮಹಾತ್ಮೆ’ ಸಿನಿಮಾ (Devi Mahatme) ತಂಡ ಇದೀಗ ಮೊದಲ ಹಂತದ ಶೂಟಿಂಗ್ ಮುಕ್ತಾಯಗೊಳಿಸಿದೆ. ಕುಂದಾಪುರ ಸುತ್ತಮುತ್ತ ಸುಂದರ ಜಾಗದಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಶೀಘ್ರದಲ್ಲೇ ಚಿತ್ರತಂಡ ಸೆಕೆಂಡ್ ಶೆಡ್ಯುಲ್ಡ್ ಶೂಟಿಂಗ್ ಆರಂಭಿಸಲಿದೆ.

ಅಂದಹಾಗೇ ಇದು ನಿರ್ದೇಶಕ ನಾಗರಾಜ್ ಸೋಮಯಾಜಿ ಹೊಸ ಸಿನಿಮಾ. ಈ ಹಿಂದೆ ಫ್ಯಾಮಿಲಿ ಆಡಿಯನ್ಸ್ ಗಾಗಿ ಮರ್ಯಾದೆ ಪ್ರಶ್ನೆ ಸಿನಿಮಾ ಕಥೆ ಉಣಬಡಿಸಿದ್ದ ಅವರೀಗ ‘ದೇವಿ ಮಹಾತ್ಮೆ’ ಚಿತ್ರದ ಮೂಲಕ ಕಾಮಿಡಿ ಥ್ರಿಲ್ಲರ್ ಕಥೆ ಹೇಳೋದಿಕ್ಕೆ ಹೊರಟಿದ್ದಾರೆ.

ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿರುವ ಬಗ್ಗೆ ಅನಿಸಿಕೆ ಹಂಚಿಕೊಂಡಿರುವ ನಾಗರಾಜ್ ಸೋಮಯಾಜಿ, ಬಿಸಿಲಲ್ಲಿ ಕೆಲಸ ಮಾಡುವುದು ಸಾಹಸ. ಅದರಲ್ಲಿಯೂ ಕುಂದಾಪುರ ಬಿಸಿಲಿನಲ್ಲಿ ಇಡೀ ತಂಡ ಉತ್ಸಹದಿಂದ ಕೆಲಸ ಮಾಡಿದೆ. ಕಡಿಮೆ ತಾಂತ್ರಿಕ ವರ್ಗದೊಂದಿಗೆ ನಿರ್ಮಾಪಕರಿಗೆ ಹೊರೆಯಾಗದಂತೆ ಚಿತ್ರೀಕರಣ ನಡೆಸಲಾಗಿದೆ. ಇನ್ನೂ, ನಿರ್ಮಾಪಕ ಗಾಂಧಿರಾಜನ್ ಕನ್ನಡ ಸಿನಿಮಾ ಬಗ್ಗೆ ತುಂಬಾನೇ ಆಸಕ್ತಿ ಇದ್ದು, ಖುಷಿಯಿಂದ ಶೂಟಿಂಗ್ ಸೆಟ್ ಗೆ ವಿಸಿಟ್ ಹಾಕಿದ್ದರು ಎಂದರು.

ದೇವಿ ಮಹಾತ್ಮೆ ಕಾಮಿಡಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ನಾಗರಾಜ ಸೋಮಯಾಜಿ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಬರವಣಿಗೆಯಲ್ಲಿ ಅರವಿಂದ್ ಕುಪ್ಳೀಕರ್, ಭಾಸ್ಕರ್ ಬಂಗೇರ‌ ಹಾಗೂ ಗುರು ಆರ್ಯ ಹಾಗೂ ವಾದಿರಾಜ ಶೆಟ್ಟಿ ಜೊತೆಯಾಗಿದ್ದಾರೆ. ಯುವಿಜಿ ಸ್ಟುಡಿಯೋ ಬ್ಯಾನರ್ ನಡಿ ವಿದ್ಯಾ ಗಾಂಧಿರಾಜನ್ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ. ಗಾಂಧಿರಾಜನ್ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ಎಸ್ ಕೆ ರಾವ್ ಛಾಯಾಗ್ರಹಣ ಹಾಗೂ ಲಿಕಿತ್ ಪ್ರಸಾದ್ ಕೆ ಶೆಟ್ಟಿ ಸಂಗೀತ ನಿರ್ದೇಶನ ದೇವಿ ಮಹಾತ್ಮೆಗೆ ಇರಲಿದೆ.

News Desk Sandalwood Times

error: Content is protected !!