ಹೊಸ ಪ್ರತಿಭೆಗಳಿಗೆ ವೇದಿಕೆ- ಕನಸಿನ ಹೊಸ ನಿರ್ಮಾಣ ಸಂಸ್ಥೆ ಆರಂಭಿಸಿದ ರಕ್ಷಿತಾ ಪ್ರೇಮ್ ದಂಪತಿ

ಹೊಸ ಪ್ರತಿಭೆಗಳಿಗೆ ವೇದಿಕೆ- ಕನಸಿನ ಹೊಸ ನಿರ್ಮಾಣ ಸಂಸ್ಥೆ ಆರಂಭಿಸಿದ ರಕ್ಷಿತಾ ಪ್ರೇಮ್ ದಂಪತಿ

ಸ್ಯಾಂಡಲ್‌ವುಡ್‌ನ ಸ್ಟಾರ್ ನಿರ್ದೇಶಕ ಜೋಗಿ ಪ್ರೇಮ್ (Jogi Prem) ಹಾಗೂ ನಟಿ- ನಿರ್ಮಾಪಕಿ ರಕ್ಷಿತಾ ಪ್ರೇಮ್ ಚಿತ್ರರಂಗದಲ್ಲಿ ಈಗ ಹೊಸ ಅಧ್ಯಾಯವೊಂದನ್ನು ಆರಂಭಿಸಿದ್ದಾರೆ. ಶ್ರೀರಾಮನವಮಿ ಹಬ್ಬದ ಸುದಿನದಂದು ತಮ್ಮ ಕನಸಿನ ಹೊಸ ನಿರ್ಮಾಣ ಸಂಸ್ಥೆ “ಫಿನಿಕ್ಸ್ ಪ್ರೇಮ್ಸ್ ಸ್ಟುಡಿಯೋಸ್” (Phoenix Prems Studios) ಅನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

​ಕೇವಲ ದೊಡ್ಡ ಸಿನಿಮಾಗಳನ್ನು ಮಾಡುವುದಷ್ಟೇ ಅಲ್ಲದೆ, ಹೊಸ ಆಲೋಚನೆ ಮತ್ತು ಅದ್ಭುತ ಪ್ರತಿಭೆ ಹೊಂದಿರುವ ಯುವಕರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಬ್ಯಾನರ್ ಪ್ರಾರಂಭಿಸಲಾಗಿದೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಹೊಸ ದಿಸೆ ನೀಡಲು ಪ್ರೇಮ್-ರಕ್ಷಿತಾ (Rakshitha Prem) ದಂಪತಿ ಮುಂದಾಗಿದ್ದಾರೆ.

​ಈ ನೂತನ ಬ್ಯಾನರ್‌ನ ಮೊದಲ ಚಿತ್ರವನ್ನು ಪ್ರೇಮ್ ಅವರ ಗರಡಿಯಲ್ಲಿ ಪಳಗಿದ ಶಿಷ್ಯ ಮಂಜುನಾಥ್ ಬಿ.ಎಸ್. ನಿರ್ದೇಶಿಸುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದ ಪ್ರೇಮ್ ಅವರ ಜೊತೆ ಸಹ-ನಿರ್ದೇಶಕರಾಗಿ ಹಾಗೂ ಚಿತ್ರ ಸಾಹಿತಿಯಾಗಿ ಗುರುತಿಸಿಕೊಂಡಿರುವ ಮಂಜುನಾಥ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಸಿನಿಮಾ.

ಪ್ರೇಮ್‌ ದಂಪತಿಯ ಹೊಸ ಸಿನಿಮಾ ನಿರ್ಮಾಣದಲ್ಲಿ  ‘ಏಕ್ ಲವ್ ಯಾ’ ಖ್ಯಾತಿಯ ಯುವ ನಟ ರಾಣಾ ಈ ಚಿತ್ರಕ್ಕೆ ನಾಯಕನಾಗಿ ಆಯ್ಕೆಯಾಗಿದ್ದಾರೆ. ಖ್ಯಾತ ಛಾಯಾಗ್ರಾಹಕ ವಿಲಿಯಂ ಡೆವಿಡ್ ಅವರ ಕ್ಯಾಮರಾ ಕಣ್ಣಲ್ಲಿ ಚಿತ್ರ ಮೂಡಿಬರಲಿದೆ. ಯುವ ಪ್ರತಿಭೆ ರೋಮಿಯೋ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ. ​ಶ್ರೀರಾಮನವಮಿ ಪ್ರಯುಕ್ತ ವಿಶೇಷ ವಿಡಿಯೋ ಬಿಡುಗಡೆ ಮಾಡುವ ಮೂಲಕ ಈ ಹೊಸ ಸಾಹಸದ ಬಗ್ಗೆ ಪ್ರೇಮ್ ಮಾಹಿತಿ ಹಂಚಿಕೊಂಡಿದ್ದಾರೆ. ಚಿತ್ರದ ಶೀರ್ಷಿಕೆ ಹಾಗೂ ಹೆಚ್ಚಿನ ತಾಂತ್ರಿಕ ವರ್ಗದ ವಿವರಗಳನ್ನು ಚಿತ್ರತಂಡ ಶೀಘ್ರದಲ್ಲೇ ಪ್ರಕಟಿಸಲಿದೆ.

News Desk Sandalwood Times

error: Content is protected !!