ಅಪ್ಪ, ಮಗಳ ಕಥೆಗೆ ಫ್ಯಾನ್ಸ್‌ ಫುಲ್‌ ಮಾರ್ಕ್ಸ್‌- Love Mocktail 3ಗೆ 25 ದಿನ ಪೂರೈಸಿದ ಸಂಭ್ರಮ

ಅಪ್ಪ, ಮಗಳ ಕಥೆಗೆ ಫ್ಯಾನ್ಸ್‌ ಫುಲ್‌ ಮಾರ್ಕ್ಸ್‌- Love Mocktail 3ಗೆ 25 ದಿನ ಪೂರೈಸಿದ ಸಂಭ್ರಮ

ಡಾರ್ಲಿಂಗ್ ಕೃಷ್ಣ (Darling Krishna) ನಿರ್ದೇಶನ ಮಾಡಿ, ನಾಯಕನಾಗಿ ನಟಿಸಿರುವ ‘ಲವ್ ಮಾಕ್ಟೇಲ್ 3’ (Love Mocktail 3) ಚಿತ್ರ ಯಶಸ್ವಿಯಾಗಿ 25 ದಿನ ಪೂರೈಸಿಕೊಂಡಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದ ಈ ಚಿತ್ರ ದಿನದಿಂದ ದಿನಕ್ಕೆ ಉತ್ತಮ ಪ್ರದರ್ಶನ ಕಂಡಿತ್ತು. ಇದೀಗ ಇಪ್ಪತೈದು ದಿನಗಳನ್ನು ಯಶಸ್ವಿಯಾಗಿ ದಾಟಿಕೊಳ್ಳುವ ಮೂಲಕ 2026ರ ಮೊದಲ ಸೂಪರ್ ಹಿಟ್ ಚಿತ್ರವಾಗಿ ದಾಖಲಾಗಿದೆ.

ಟಾಕ್ಸಿಕ್ ಚಿತ್ರ ಮುಂದಕ್ಕೆ ಹೋಗುತ್ತಲೇ ಮಾರ್ಚ್ 19ರಂದು ‘ಲವ್ ಮಾಕ್ಟೇಲ್ 3’ ಚಿತ್ರ ಬಿಡುಗಡೆಗೊಂಡಿತ್ತು. ಕೆವಿಎನ್ ಸಂಸ್ಥೆ ವಿತರಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿತ್ತು. ಎಲ್ಲ ದಿಕ್ಕಿನಿಂದಲೂ ಸಕಾರಾತ್ಮಕ ವಾತಾವರಣದಲ್ಲಿ ಬಿಡುಗಡೆಗೊಂಡಿದ್ದ ‘ಲವ್ ಮಾಕ್ಟೇಲ್ 3’ ಅದೇ ಆವೇಗದೊಂದಿಗೆ ಇಪ್ಪತೈದರ ನಿರ್ಣಾಯಕ ಘಟ್ಟವನ್ನು ದಾಟಿಕೊಂಡಿದೆ. ಇಂಥಾ ಗೆಲುವಿಗೆ ಕಾರಣರಾದ ಪ್ರೇಕ್ಷಕರಿಗೆ ಧನ್ಯವಾದ ಸಲ್ಲಿಸುತ್ತಲೇ, ಡಾರ್ಲಿಂಗ್ ಕೃಷ್ಣ ಲವ್ ಮಾಕ್ಟೇಲ್ ಸರಣಿಯ ಹ್ಯಾಟ್ರಿಕ್ ಗೆಲುವನ್ನು ಸಂಭ್ರಮಿಸಿದ್ದಾರೆ.

ಕ್ರಿಸ್‌ಮಿ ಬ್ಯಾನರಿನಡಿಯಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಸಂವೃತ, ಅಮೃತಾ ಅಯ್ಯಂಗಾರ್, ದಿಲೀಪ್ ರಾಜ್, ಶ್ವೇತಾ ಪ್ರಸಾದ್, ರಚೆಲ್ ಡೇವಿಡ್, ನಯೇರಾ, ಜಗದೀಶ್, ಅಭಿಲಾಶ್, ಗಿರಿರಾಜ್, ದಳಪತಿ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ. ಶ್ರೀ ಕ್ರೇಜಿ ಮೈಂಡ್ಸ್ ಛಾಯಾಗ್ರಹಣ ಮತ್ತು ಸಂಕಲನ, ನಕುಲ್ ಅಭಯಂಕರ್ ಸಂಗೀತ, ಅಮರ್ ಮತ್ತು ಜೋನಾ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

News Desk Sandalwood Times

error: Content is protected !!