ಬೃಂದಾವಿಹಾರಿ: ಗೋಲ್ಡನ್‌ ಸ್ಟಾರ್‌ ಗಣೇಶ್‌, ದೇವಿಕಾ ಹೆಜ್ಜೆ ಹಾಕಿದ ‘ರಾಧಾ ರಾಧಾʼ ಹಾಡಿಗೆ ಫ್ಯಾನ್ಸ್‌ ಮೆಚ್ಚುಗೆ

ಬೃಂದಾವಿಹಾರಿ: ಗೋಲ್ಡನ್‌ ಸ್ಟಾರ್‌ ಗಣೇಶ್‌, ದೇವಿಕಾ ಹೆಜ್ಜೆ ಹಾಕಿದ ‘ರಾಧಾ ರಾಧಾʼ ಹಾಡಿಗೆ ಫ್ಯಾನ್ಸ್‌ ಮೆಚ್ಚುಗೆ

ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ (Golden Star Ganesh) ನಟನೆಯ “ಬೃಂದಾವಿಹಾರಿ” ಚಿತ್ರದ ರಾಧಾ ರಾಧಾ ಹಾಡಿಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕರಾಗಿ ಎರಡು ದಶಕಗಳನ್ನು ಪೂರೈಸಿರುವ ಸಂಭ್ರಮದಲ್ಲಿದ್ದಾರೆ‌. ಗಣೇಶ್ ಅವರು ನಾಯಕರಾಗಿ ನಟಿಸಿರುವ, ಹೆಸರಾಂತ ನಿರ್ಮಾಪಕ ಸಮೃದ್ಧಿ ವಿ ಮಂಜುನಾಥ್ ನಿರ್ಮಾಣದ ಹಾಗೂ ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ನಿರ್ದೇಶನದ “ಬೃಂದಾವಿಹಾರಿ” ಚಿತ್ರದ ರಾಧಾ ರಾಧಾ ಇತ್ತೀಚೆಗೆ ತುಮಕೂರಿನಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಿತ್ತು. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ಮೂಲಕ ಈ ಹಾಡು ಬಿಡುಗಡೆಯಾಗಿದೆ.

ಬಿಡುಗಡೆಯಾದ ಮೂರೇ ದಿನಗಳಲ್ಲೇ ರಾಧಾ ರಾಧಾ ಹಾಡು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. 2.5 ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದೆ. ಗಣೇಶ್ ಅವರ ಅಭಿಮಾನಿಗಳು ಈ ಸುಮಧುರ ಹಾಡಿಗೆ ಫಿದಾ ಆಗಿದ್ದಾರೆ. ಹೇಶಮ್ ಅಬ್ದುಲ್ ವಹಾಬ್ ಸಂಗೀತ ನೀಡಿರುವ ಈ ಹಾಡನ್ನು ಸಿದ್ ಶ್ರೀರಾಮ್ ಮತ್ತು ಚಿನ್ಮಯಿ ಸೊಗಸಾಗಿ ಹಾಡಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ – ದೇವಿಕಾ ಭಟ್ ಅಭಿನಯಿಸಿದ್ದಾರೆ.

 

View this post on Instagram

 

A post shared by Anand Audio (@aanandaaudio)

ಕನ್ನಡ ಚಿತ್ರರಂಗದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬಂದಿರುವ ಸಮೃದ್ಧಿ ಮಂಜುನಾಥ್ ಅವರ ಅದ್ದೂರಿ ನಿರ್ಮಾಣದ, ಕೃಷ್ಣಂ ಪ್ರಣಯ ಸಖಿ ಚಿತ್ರದ ನಂತರ ಗಣೇಶ್ ಹಾಗೂ ಶ್ರೀನಿವಾಸರಾಜು ಅವರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಬೃಂದಾ ವಿಹಾರಿ ಚಿತ್ರದ ಬಗ್ಗೆ ಆರಂಭದಿಂದಲೂ ಸಾಕಷ್ಟು ನಿರೀಕ್ಷೆಯಿದ್ದು, ಅಭಿಮಾನಿಗಳು ಚಿತ್ರ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ‌ಗಣೇಶ್‌ಗೆ ನಾಯಕಿಯರಾಗಿ ದೇವಿಕಾ ಭಟ್  (Devika Bhat) ಮತ್ತು ಮಾಳವಿಕಾ ಶರ್ಮ ಅಭಿನಯಿಸಿದ್ದಾರೆ. ಚಂದನವನದ ಅನುಭವಿ ಹಾಗೂ ಹಿರಿಯ ಕಲಾವಿದರ ತಾರಾಬಳಗವೇ ಈ ಚಿತ್ರದಲ್ಲಿದೆ.

News Desk Sandalwood Times

error: Content is protected !!