ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಇರುಮುಡಿ ಹೊತ್ತು ಸಾಗಿದ ಶಿವಣ್ಣ ದಂಪತಿ
ನಟ ಶಿವರಾಜ್ಕುಮಾರ್ (Shivarajkumar) ಮತ್ತು ಗೀತಾ (Geetha) ದಂಪತಿ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಇಂದು (ಜ.14) ಇರುಮುಡಿ ಹೊತ್ತು ಸಾಗಿದ್ದಾರೆ. ಈ ವೇಳೆ, ನಟನ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
View this post on Instagram
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಶ್ರೀಕ್ಷೇತ್ರ ಬೆಜ್ಜವಳ್ಳಿ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಶಿವಣ್ಣ ಇರುಮುಡಿ ಹೊತ್ತು ಸಾಗಿದ್ದಾರೆ. ಈ ವೇಳೆ, ಪತ್ನಿ ಗೀತಾ ಸಾಥ್ ನೀಡಿದ್ದಾರೆ. ಬೆಜ್ಜವಳ್ಳಿ ಅಯ್ಯಪ್ಪನ ಉತ್ಸವದ ಹಿನ್ನೆಲೆಯಲ್ಲಿ ಇಂದು ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.
ಅಂದಹಾಗೆ, ಉತ್ತರಕಾಂಡ, ಜೈಲರ್ 2, ಎ ಫಾರ್ ಆನಂದ್, ಆಪರೇಷನ್ ಡ್ರೀಮ್ ಥಿಯೇಟರ್ ಸೇರಿದಂತೆ ಹಲವು ಚಿತ್ರಗಳಿವೆ.

